Bible 2 India Mobile
[VER] : [KANNADA]     [PL]  [PB] 
 <<  Malachi 1 >> 

1ಯೆಹೋವನು ಇಸ್ರಾಯೇಲರ ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ.

2ಯೆಹೋವನು ಇಂತೆನ್ನುತ್ತಾನೆ, <<ನಾನು ನಿಮ್ಮನ್ನು ಪ್ರೀತಿಸಿದ್ದೇನೆ.>> ನೀವೋ <<ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?>> ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೇ?

3<<ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪ್ರಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ>> ಇದು ಯೆಹೋವನ ನುಡಿ.

4ಹೀಗಿರಲು ಎದೋಮ್ಯರು, <<ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು>> ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, <<ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಪ್ರಾಂತ್ಯದವರೂ, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.

5ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, <ಮಹಾ ಮಹಿಮೆಯುಳ್ಳವನು> >> ಅಂದುಕೊಳ್ಳುವಿರಿ.

6<<ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?>> ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, <<ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?>> ಅನ್ನುತ್ತೀರಿ.

7ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. <<ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?>> ಅನ್ನುತ್ತೀರಿ. <<ಯೆಹೋವನ ಮೇಜಿಗೆ ಘನತೆಯೇನಿದೆ?>> ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ.

8ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನು ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೆರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,

9<<ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.

10<<ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.

11<<ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹುಮಾನ್ಯವಾಗಿದೆ.>> ಇದು ಸೇನಾಧೀಶ್ವರನಾದ ಯೆಹೋವನ ನುಡಿ.

12ನೀವೋ, <<ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.

13ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ>> ಇದು ಸೇನಾಧೀಶ್ವರನಾದ ಯೆಹೋವನ ನುಡಿ. <<ಕಳುವಾದ ಪಶುವನ್ನೂ, ಕುಂಟಾದದ್ದನ್ನೂ, ರೋಗಉಳ್ಳದ್ದನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ>> ಇದು ಯೆಹೋವನ ನುಡಿ.

14<<ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶುವನ್ನು ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ>> ಇದು ಸೇನಾಧೀಶ್ವರನಾದ ಯೆಹೋವನು ನುಡಿ.



 <<  Malachi 1 >> 


Bible2india.com
© 2010-2024
Help
Single Panel

Laporan Masalah/Saran