1ಆಗ ನಾನು ಕಣ್ಣೆತ್ತಿ ನೋಡಲು ಇಗೋ, ಹಾರುತ್ತಿರುವ ಒಂದು ಸುರುಳಿಯು ಕಾಣಿಸಿತು.
2ಆಗ ದೂತನು ನನಗೆ, <<ನಿನಗೆ ಏನು ಕಾಣಿಸುತ್ತದೆ?>> ಎಂದಾಗ ನಾನು, ಹಾರುತ್ತಿರುವ ಒಂದು ಸುರುಳಿಯು ಕಾಣಿಸುತ್ತದೆ ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದು ಉತ್ತರಕೊಟ್ಟೆನು.
3ಆಗ ದೂತನು ನನಗೆ, <<ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು.
4ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, <ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು> >> ಎಂದು ಹೇಳಿದನು.
5ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, <<ಕಂಡು ಬರುತ್ತಿರುವ ಆ ವಸ್ತು ಏನೆಂದು ನೋಡು>> ಎಂಬುದಾಗಿ ನನಗೆ ಹೇಳಿದನು.
6ನಾನು, <<ಏನದು?>> ಎಂದು ಕೇಳಿದ್ದಕ್ಕೆ ಅವನು, <<ಇದು ಅಳೆಯುವ ಬುಟ್ಟಿ>>ಎಂದನು. ಇದಲ್ಲದೆ ಅವನು, <<ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು>> ಎಂದನು.
7ಇಗೋ, ತಟ್ಟೆಯಾಕಾರದ ಸೀಸದ ಮುಚ್ಚಳವು ತೆರೆಯಿತು. ಆಹಾ, ಒಬ್ಬ ಸ್ತ್ರಿ ಅದರಲ್ಲಿ ಕುಳಿತುಕೊಂಡಿದ್ದಳು.
8ಆಗ ದೂತನು ಹೇಳಿದ್ದೇನೆಂದರೆ, <<ಇದು ದುಷ್ಟತ್ವವು>> ಎಂದು ಹೇಳಿ ಅವಳನ್ನು ಬುಟ್ಟಿಯೊಳಗೆ ಪುನಃ ಅದುಮಿ ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು.
9ನಾನು ಕಣ್ಣೆತ್ತಿ ನೋಡಲು, ಆಹಾ ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು. ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು. ಅವರು ಅಳತೆಯ ಬುಟ್ಟಿಯನ್ನು ಎತ್ತಿಕೊಂಡು ಹಾರಿ ಹೋದರು.
10ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, <<ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?>>ಎಂದು ಹೇಳಿದೆನು.
11ದೂತನು ನನಗೆ, <<ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವುದಕ್ಕಾಗಿ ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ವಂತ ಸ್ಥಾನದಲ್ಲಿ ಇರಿಸಲ್ಪಡುವುದು>>ಎಂದನು.