Bible 2 India Mobile
[VER] : [KANNADA]     [PL]  [PB] 
 <<  Numbers 28 >> 

1ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

2<<ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, <ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.>

3ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, <ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.

4ಹೊತ್ತಾರೆಯಲ್ಲಿ ಒಂದು ಕುರಿಯನ್ನು, ಸಾಯಂಕಾಲದಲ್ಲಿ ಒಂದು ಕುರಿಯನ್ನೂ ಸಮರ್ಪಿಸಬೇಕು.

5ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಟವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.

6ನೀವು ಪ್ರತಿನಿತ್ಯವೂ ಯೆಹೋವನಿಗೆ ಸುಗಂಧಕರವಾದ ಈ ಸರ್ವಾಂಗಹೋಮವನ್ನು ಮಾಡಬೇಕೆಂಬುದಾಗಿ ಸೀನಾಯಿ ಬೆಟ್ಟದಲ್ಲಿ ನೇಮಕವಾಯಿತು.

7ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.

8ಸಾಯಂಕಾಲದಲ್ಲಿ ಇನ್ನೊಂದು ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧಕರ ಹೋಮವಾಗಿರುವುದು.

9<< <ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರುಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.

10ನಿತ್ಯ ದಹನಬಲಿ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನಬಲಿಯೂ, ಅದರ ಪಾನದ ಅರ್ಪಣೆಯೂ ಆಗಬೇಕು.

11<< <ಪ್ರತಿ ತಿಂಗಳ ಆರಂಭದಲ್ಲಿ ನೀವು ದಹನಬಲಿಗಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರುಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.

12ಒಂದೊಂದು ಹೋರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು ಸೇರಿಸಬೇಕು.

13ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ದಹನಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.

14ಇವುಗಳಿಗೆ ತಕ್ಕ ಪಾನದ್ರವ್ಯಾರ್ಪಣೆ ಯಾವುದೆಂದರೆ: ಒಂದೊಂದು ಹೋರಿಗೆ ಮೂರು ಸೇರು ದ್ರಾಕ್ಷಾರಸವನ್ನು, ಟಗರಿಗೆ ಎರಡು ಸೇರು ದ್ರಾಕ್ಷಾರಸವನ್ನು, ಕುರಿಗೆ ಒಂದುವರೆ ಸೇರು ದ್ರಾಕ್ಷಾರಸವನ್ನು, ವರುಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ದಹನಬಲಿಯನ್ನು ಮಾಡಬೇಕು.

15ನಿತ್ಯ ದಹನಬಲಿಯ ಹೊರತು ದೋಷಪರಿಹಾರಯಜ್ಞಕ್ಕಾಗಿ ಒಂದು ಹೋತವನ್ನು ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನು ಯೆಹೋವನಿಗೆ ಸಮರ್ಪಿಸಬೇಕು.

16<< <ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು.

17ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಉಟಮಾಡಬೇಕು.

18ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.

19ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರುಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.

20ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,

21ಏಳು ಕುರಿಮರಿಯಲ್ಲಿ ಒಂದೊಂದಕ್ಕೆ ಎಣ್ಣೆ ಬೆರೆಸಿದ ಮೂರು ಸೇರನ್ನು,

22ಅದಲ್ಲದೆ ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.

23ಪ್ರತಿ ದಿನದ ಪ್ರಾತಃಕಾಲದಲ್ಲಿ ಸರ್ವಾಂಗಹೋಮವಲ್ಲದೆ ಇವುಗಳನ್ನು ಹೆಚ್ಚಾಗಿ ಸಮರ್ಪಿಸಬೇಕು.

24ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.

25ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡಿಸಬಾರದು.

26<< <ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು.

27ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರುಷದ ಏಳು ಕುರಿಗಳು ಇವುಗಳನ್ನೂ,

28ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ಹಾಗೂ ಪ್ರತಿಯೊಂದು ಟಗರಿಗೆ ಒಂಭತ್ತು ಸೇರು,

29ಹೋರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನೂ,

30ದೋಷಪರಿಹಾರಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.

31ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.> >>


  Share Facebook  |  Share Twitter

 <<  Numbers 28 >> 


Bible2india.com
© 2010-2024
Help
Dual Panel

Laporan Masalah/Saran