Bible 2 India Mobile
[VER] : [KANNADA]     [PL]  [PB] 
 <<  Numbers 34 >> 

1ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳೀದ್ದೇನೆಂದರೆ,

2<<ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, <ಸಮಸ್ತ ಕಾನಾನ್ ದೇಶವೇ ನಿಮಗೆ ಸ್ವದೇಶವಾಗಿ ದೊರಕುವುದು.

3ನೀವು ಅಲ್ಲಿ ಸೇರಿದಾಗ ಎದೋಮ್ಯರ ಗಡಿಗಳ ಬಳಿಯಲ್ಲಿರುವ ಚಿನ್ ಅರಣ್ಯವು ನಿಮ್ಮ ದಕ್ಷಿಣದ ಮೇರೆಯಾಗಿರಬೇಕು. ಆ ಮೇರೆಯ ಪೂರ್ವದಿಕ್ಕಿನಲ್ಲಿರುವ ಲವಣಸಮುದ್ರದ ಕೊನೆಯಿಂದ ಪ್ರಾರಂಭಿಸಬೇಕು.

4ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರಬೇಕು. ಅದರ ಮೂಲೆ ಕಾದೇಶ್ ಬರ್ನೇಯದ ದಕ್ಷಿಣದ ಕಡೆಯಲ್ಲಿರಬೇಕು. ಅಲ್ಲಿಂದ ಅದು ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.

5ಅಚ್ಮೋನಿನಿಂದ ಐಗುಪ್ತ ದೇಶದ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯಬೇಕು.

6ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ದೇಶದ ಮೇರೆಯಾಗಿರುವುದು.

7ಉತ್ತರ ದಿಕ್ಕಿನ ಮೇರೆಗಾಗಿ ನೀವು ಮಹಾಸಮುದ್ರದಿಂದ,

8ಹೋರ್ ಪರ್ವತದಿಂದ ಹಮಾತಿನವರೆಗೂ ಮತ್ತು ಅಲ್ಲಿಂದ ಚೆದಾದಿನ ಹತ್ತಿರಕ್ಕೆ ಇರುವುದು.

9ಆ ಮೇಲೆ ಅದು ಜಿಫ್ರೋನಿಗೆ ಹೋಗಿ ಹಚರೇನಾನಿನ ಬಳಿಯಲ್ಲಿ ಮುಗಿಯಬೇಕು.ಇದು ನಿಮ್ಮ ಉತ್ತರ ದಿಕ್ಕಿನ ಮೇರೆಯಾಗಿರುವುದು.

10ಪೂರ್ವದಿಕ್ಕಿನ ಮೇರೆಗಾಗಿ ಹಚರೇನಾನಿನಿಂದ ಶೆಫಾಮಿಗೆ ಗುರುತುಹಾಕಬೇಕು.

11ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು.

12ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು> >> ಎಂದನು.

13ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲರಿಗೆ, <<ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ. ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.

14ರೂಬೇನ್ಯರ ಮಕ್ಕಳ ಗೋತ್ರವೂ, ಗಾದ್ಯರ ಮಕ್ಕಳ ಗೋತ್ರವೂ, ಮನಸ್ಸೆ ಕುಲದವರಲ್ಲಿ ಅರ್ಧಗೋತ್ರವೂ ತಮ್ಮ ಪಿತೃಗಳ ಗೋತ್ರಗಳ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಹೊಂದಿದ್ದಾರೆ.

15ಎರಡುವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನ್ ನದಿಯ ಆಚೆ ಯೆರಿಕೋ ಪಟ್ಟಣದ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ.>>

16ಯೆಹೋವನು ಮೋಶೆಯ ಸಂಗಡ ಮಾತನಾಡಿ ಆಜ್ಞಾಪಿಸಿದ್ದೇನೆಂದರೆ,

17<<ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಯಾವುವೆಂದರೆ: ಮಹಾಯಾಜಕನಾದ ಎಲ್ಲಾಜಾರನು ಮತ್ತು ನೂನನ ಮಗನಾದ ಯೆಹೋಶುವನೂ.

18ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ. ಇವರು ಕಾನಾನ್ ದೇಶದಲ್ಲಿ ತಮ್ಮ ತಮ್ಮ ಸ್ವಾಸ್ತ್ಯಗಳನ್ನು ಹಂಚಿಕೊಡಬೇಕು.

19ನೀವು ಆಯಾ ಕುಲಗಳಿಂದ ನೇಮಿಸಬೇಕಾದವರು ಯಾರೆಂದರೆ: ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,

20ಸಿಮೆಯೋನ್ ಕುಲದಿಂದ ಅಮ್ಮಿಹೂದನ ಮಗ ಶೆಮೂವೇಲ್,

21ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗ ಎಲೀದಾದ್,

22ದಾನ್ ಕುಲದಿಂದ ಯೊಗ್ಲೀಯ ಮಗ ಬುಕ್ಕೀ ಕುಲಾಧಿಪತಿ,

23ಯೋಸೇಫನ ವಂಶದವರಲ್ಲಿ: ಮನಸ್ಸೆ ಕುಲದಿಂದ ಏಫೋದನ ಮಗ ಹನ್ನೀಯೇಲ್ ಕುಲಾಧಿಪತಿ,

24ಎಫ್ರಾಯೀಮ್ ಕುಲದಿಂದ ಶಿಫ್ಟಾನನ ಮಗ ಕೆಮೂವೇಲ್ ಕುಲಾಧಿಪತಿ,

25ಜೆಬುಲೂನ್ ಕುಲದಿಂದ ಪರ್ನಾಕನ ಮಗ ಎಲೀಚಾಫಾನ್ ಕುಲಾಧಿಪತಿ,

26ಇಸ್ಸಾಕಾರ ಕುಲದಿಂದ ಅಜ್ಜಾನನ ಮಗ ಪಲ್ಟೀಯೇಲ್ ಕುಲಾಧಿಪತಿ,

27ಆಶೇರ್ ಕುಲದಿಂದ ಶೆಲೋಮಮೀಯ ಮಗ ಅಹೀಹೂದ್ ಕುಲಾಧಿಪತಿ,

28ನಫ್ತಾಲಿ ಕುಲದಿಂದ ಅಮ್ಮಿಹೂದನ ಮಗ ಪೆದಹೇಲ್ ಕುಲಾಧಿಪತಿ ಇವರೇ.>>

29ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಅವರವರ ಸ್ವಾಸ್ತ್ಯಗಳನ್ನು ಹಂಚಿಕೊಡುವುದಕ್ಕೆ ಯೆಹೋವನು ಇವರನ್ನೆಲ್ಲಾ ನೇಮಿಸಿದನು.


  Share Facebook  |  Share Twitter

 <<  Numbers 34 >> 


Bible2india.com
© 2010-2024
Help
Dual Panel

Laporan Masalah/Saran