Bible 2 India Mobile
[VER] : [KANNADA]     [PL]  [PB] 
 <<  Habakkuk 1 >> 

1ಪ್ರವಾದಿಯಾದ ಹಬಕ್ಕೂಕನಿಗೆ ಕಂಡುಬಂದ ದೈವೋಕ್ತಿ:

2ಯೆಹೋವನೇ, ನಾನು ಎಷ್ಟು ದಿನಗಳಿಂದ ನಿನಗೆ ಮೊರೆಯಿಡುತ್ತಿದ್ದರೂ ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ.

3ಕೇಡನ್ನೇ ನನ್ನ ಕಣ್ಣಿಗೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಏಕೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.

4ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.

5ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ.

6ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರು ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.

7ಅವರ ಅಧಿಕಾರವನ್ನೂ ತಮ್ಮದೇ ಆದ ನ್ಯಾಯ ನೀತಿಯನ್ನು ರೂಪಿಸಿಕೊಂಡು; ಅವರ ಸ್ವ ಸಾಮರ್ಥ್ಯ, ಸ್ವ ಗೌರವಕ್ಕೆ ಪ್ರಾಮುಖ್ಯತೆ ನೀಡುವರು.

8ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ ಓಡಬಲ್ಲವು, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅದರ ಸವಾರರು ರಭಸದಿಂದ ಹಾರಿಬರುವರು, ಬೇಟೆಯನ್ನು ಕಬಳಿಸಲು ಹಾರಿ ಬರುವ ರಣಹದ್ದಿನಂತೆ ದೂರದಿಂದ ಹಾರಿಬರುವರು.

9ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು.

10ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.

11ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೊಪಕ್ಕೆ ಗುರಿಯಾಗಿವರು.

12ನನ್ನ ದೇವರಾದ ಯೆಹೋವನೇ, ನೀನು ಅನಾದಿಯಿಂದ ಇರುವ ನಮ್ಮ ದೇವರು, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.

13ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನುನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?

14ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ಆಳುವವನಿಲ್ಲದ ಕ್ರಿಮಿಕೀಟಗಳ ಗತಿಗೆ ಏಕೆ ಬರಮಾಡಿದ್ದೀ?

15ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?

16ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.

17ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?


  Share Facebook  |  Share Twitter

 <<  Habakkuk 1 >> 


Bible2india.com
© 2010-2024
Help
Dual Panel

Laporan Masalah/Saran