Bible 2 India Mobile
[VER] : [KANNADA]     [PL]  [PB] 
 <<  Genesis 5 >> 

1ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.

2ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ <<ಮನುಷ್ಯ>> ಎಂದು ಹೆಸರಿಟ್ಟನು.

3ಆದಾಮನು ನೂರಮೂವತ್ತು ವರುಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.

4ಸೇತನು ಹುಟ್ಟಿದ ಮೇಲೆ, ಆದಾಮನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರು ವರುಷ ಬದುಕಿದನು.

5ಆದಾಮನು ಒಟ್ಟು ಒಂಭೈನೂರ ಮೂವತ್ತು ವರುಷ ಬದುಕಿ ನಂತರ ಸತ್ತನು.

6ಸೇತನು ನೂರಐದು ವರುಷದವನಾದಾಗ, ಎನೋಷನನ್ನು ಪಡೆದನು.

7ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರುಷ ಬದುಕಿದನು.

8ಸೇತನು ಒಟ್ಟು ಒಂಭೈನೂರ ಹನ್ನೆರಡು ವರುಷ ಬದುಕಿ ನಂತರ ಸತ್ತನು.

9ಎನೋಷನು ತೊಂಭತ್ತು ವರುಷದವನಾದಾಗ, ಕೇನಾನನನ್ನು ಪಡೆದನು.

10ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರುಷ ಬದುಕಿದನು.

11ಎನೋಷನು ಒಟ್ಟು ಒಂಭೈನೂರ ಐದು ವರುಷ ಬದುಕಿ ನಂತರ ಸತ್ತನು.

12ಕೇನಾನನು ಎಪ್ಪತ್ತು ವರುಷದವನಾದಾಗ, ಮಹಲಲೇಲನನ್ನು ಪಡೆದನು.

13ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರುಷ ಬದುಕಿದನು.

14ಕೇನಾನನು ಒಟ್ಟು ಒಂಭೈನೂರ ಹತ್ತು ವರುಷ ಬದುಕಿ ನಂತರ ಸತ್ತನು.

15ಮಹಲಲೇಲನು ಅರವತ್ತೈದು ವರುಷದವನಾದಾಗ ಯೆರೆದನನ್ನು ಪಡೆದನು.

16ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಮೂವತ್ತು ವರುಷ ಬದುಕಿದನು.

17ಮಹಲಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರುಷ ಬದುಕಿ ನಂತರ ಸತ್ತನು.

18ಯೆರೆದನು ನೂರ ಅರುವತ್ತೆರಡು ವರುಷದವನಾದಾಗ ಹನೋಕನನ್ನು ಪಡೆದನು.

19ಹನೋಕನು ಹುಟ್ಟಿದ ಮೇಲೆ ಯೆರೆದನು ಎಂಟುನೂರು ವರುಷ ಬದುಕಿದನು.

20ಯೆರೆದನು ಒಟ್ಟು ಒಂಭೈನೂರ ಅರುವತ್ತೆರಡು ವರುಷ ಬದುಕಿ ನಂತರ ಸತ್ತನು.

21ಹನೋಕನು ಅರುವತ್ತೈದು ವರುಷದವನಾದಾಗ ಮೆತೂಷೆಲಹನನ್ನು ಪಡೆದನು.

22ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರುಷ ಬದುಕಿದನು.

23ಹನೋಕನು ಬದುಕಿದ ಒಟ್ಟು ಕಾಲ ಮುನ್ನೂರ ಅರುವತ್ತೈದು ವರುಷಗಳು.

24ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.

25ಮೆತೂಷೆಲಹನು ನೂರ ಎಂಭತ್ತೇಳು ವರುಷದವನಾದಾಗ ಲೆಮೆಕನನ್ನು ಪಡೆದನು.

26ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಏಳುನೂರ ಎಂಭತ್ತೆರಡು ವರುಷ ಬದುಕಿದನು.

27ಮೆತೂಷೆಲಹನು ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷ ಬದುಕಿ ನಂತರ ಸತ್ತನು.

28ಲೆಮೆಕನು ನೂರ ಎಂಭತ್ತೆರಡು ವರುಷದವನಾದಾಗ ಒಬ್ಬ ಮಗನನ್ನು ಪಡೆದನು.

29ಅವನಿಗೆ <<ನೋಹ>> ಎಂದು ಹೆಸರಿಟ್ಟು, <<ಯೆಹೋವನು ಶಾಪಕೊಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು>> ಎಂದು ಹೇಳಿದನು.

30ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರುಷ ಬದುಕಿದನು.

31ಲೆಮೆಕನು ಒಟ್ಟು ಏಳುನೂರ ಎಪ್ಪತೇಳು ವರುಷ ಬದುಕಿ ನಂತರ ಸತ್ತನು.

32ನೋಹನು ಐನೂರು ವರುಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು.


  Share Facebook  |  Share Twitter

 <<  Genesis 5 >> 


Bible2india.com
© 2010-2024
Help
Dual Panel

Laporan Masalah/Saran