Bible 2 India Mobile
[VER] : [KANNADA]     [PL]  [PB] 
 <<  Psalms 11 >> 

1ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, <<ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ>> ಎಂದು ಹೇಳುವುದೇಕೆ?

2ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ.

3ಆಧಾರಗಳೇ ಕೆಡವಲ್ಪಟ್ಟ ಮೇಲೆ ನೀತಿವಂತನ ಗತಿ ಏನಾದೀತು?

4ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

5ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.

6ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.

7ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನಿಧ್ಯವನ್ನು ಸೇರುವರು.


  Share Facebook  |  Share Twitter

 <<  Psalms 11 >> 


Bible2india.com
© 2010-2024
Help
Dual Panel

Laporan Masalah/Saran