Bible 2 India Mobile
[VER] : [KANNADA]     [PL]  [PB] 
 <<  Psalms 110 >> 

1ಯೆಹೋವನು ನನ್ನ ಒಡೆಯನಿಗೆ, <<ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು>> ಎಂದು ನುಡಿದನು.

2ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.

3ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.

4<<ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ>> ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.

5ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.

6ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.

7ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು.


  Share Facebook  |  Share Twitter

 <<  Psalms 110 >> 


Bible2india.com
© 2010-2024
Help
Dual Panel

Laporan Masalah/Saran