Bible 2 India Mobile
[VER] : [KANNADA]     [PL]  [PB] 
 <<  Psalms 12 >> 

1ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.

2ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.

3ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.

4ಅವರು, <<ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?>> ಎಂದು ಹೇಳಿಕೊಳ್ಳುತ್ತಾರಲ್ಲಾ.

5ಯೆಹೋವನು, <<ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು>> ಎಂದು ಹೇಳುತ್ತಾನೆ.

6ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.

7ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ,

8ಯೆಹೋವನೇ, ನೀನು ಅವರನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.


  Share Facebook  |  Share Twitter

 <<  Psalms 12 >> 


Bible2india.com
© 2010-2024
Help
Dual Panel

Laporan Masalah/Saran