Bible 2 India Mobile
[VER] : [KANNADA]     [PL]  [PB] 
 <<  Psalms 124 >> 

1<<ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?>>, ಎಂದು ಇಸ್ರಾಯೇಲರೇ ಹೇಳಲಿ.

2ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ,

3<<ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;

4ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;

5ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.>>

6ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.

7ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.

8ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.


  Share Facebook  |  Share Twitter

 <<  Psalms 124 >> 


Bible2india.com
© 2010-2024
Help
Dual Panel

Laporan Masalah/Saran