Bible 2 India Mobile
[VER] : [KANNADA]     [PL]  [PB] 
 <<  Psalms 125 >> 

1ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.

2ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.

3ದುಷ್ಟರ ದಂಡಾಧಿಕಾರವು ನೀತಿವಂತರ ಸ್ವಾಸ್ತ್ಯದಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.

4ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, ಆಗಿರುವವರಿಗೆ ಉಪಕಾರಮಾಡು.

5ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ತಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.


  Share Facebook  |  Share Twitter

 <<  Psalms 125 >> 


Bible2india.com
© 2010-2024
Help
Dual Panel

Laporan Masalah/Saran