Bible 2 India Mobile
[VER] : [KANNADA]     [PL]  [PB] 
 <<  Psalms 126 >> 

1ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.

2ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, <<ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ>> ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

3ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.

4ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು.

5ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,

6ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.


  Share Facebook  |  Share Twitter

 <<  Psalms 126 >> 


Bible2india.com
© 2010-2024
Help
Dual Panel

Laporan Masalah/Saran