Bible 2 India Mobile
[VER] : [KANNADA]     [PL]  [PB] 
 <<  Psalms 129 >> 

1<<ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ>> ಎಂದು ಇಸ್ರಾಯೇಲರು ಹೇಳಲಿ.

2<<ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ.

3ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರೆಗಳನ್ನು ಹಾಕಿದರು.>>

4ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು.

5ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ.

6ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ;

7ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.

8ಹಾದುಹೋಗುವವರು, <<ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ>> ಎಂದೂ ಹೇಳುವುದಿಲ್ಲ.


  Share Facebook  |  Share Twitter

 <<  Psalms 129 >> 


Bible2india.com
© 2010-2024
Help
Dual Panel

Laporan Masalah/Saran