Bible 2 India Mobile
[VER] : [KANNADA]     [PL]  [PB] 
 <<  Psalms 13 >> 

1ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?

2ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು, ಆಲೋಚಿಸಿಕೊಳ್ಳುತ್ತಾ ಇರಬೇಕು? ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು?

3ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.

4ನನ್ನ ಶತ್ರುವು, <<ನಾನು ಅವನನ್ನು ಜಯಿಸಿದೆನು>> ಎಂದು ಹೇಳಿಕೊಳ್ಳಬಾರದು; ವೈರಿಗಳು, <<ನನ್ನ ಎದುರಾಳಿಯು ಜಾರಿಬಿದ್ದನು>> ಎಂದು ಹಿಗ್ಗಬಾರದು.

5ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ; ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.

6ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.


  Share Facebook  |  Share Twitter

 <<  Psalms 13 >> 


Bible2india.com
© 2010-2024
Help
Dual Panel

Laporan Masalah/Saran