Bible 2 India Mobile
[VER] : [KANNADA]     [PL]  [PB] 
 <<  Psalms 132 >> 

1ಯೆಹೋವನೇ, ದಾವೀದನ ಹಿತಕ್ಕೋಸ್ಕರ, ಅವನ ಶ್ರಮೆಗಳನ್ನು ನೆನಪುಮಾಡಿಕೋ.

2ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,

3<<ನಾನು ನನ್ನ ಮನೆಯೊಳಗೆ ಪ್ರವೇಶಿಸುವುದಿಲ್ಲ, ಮಂಚವನ್ನು ಹತ್ತುವುದಿಲ್ಲ,

4ಕಣ್ಣುಗಳನ್ನು ಮುಚ್ಚುವುದಿಲ್ಲ, ರೆಪ್ಪೆಗಳನ್ನು ಕೂಡಿಸುವುದಿಲ್ಲ>> ಎಂದು

5ಅವನು ಯೆಹೋವನಿಗೆ ಪ್ರಮಾಣಮಾಡಿ, ಯಾಕೋಬನ ಶೂರನಿಗೆ ಹರಕೆ ಮಾಡಿಕೊಂಡನಲ್ಲಾ.

6ಇಗೋ, ಅದು ಎಫ್ರಾತದಲ್ಲಿರುತ್ತದೆಂದು ಕೇಳಿದೆವು; ಯಹಾರ್ ಮೈದಾನದಲ್ಲಿ ನಮಗೆ ಸಿಕ್ಕಿತು.

7<<ಬನ್ನಿರಿ, ಆತನ ಮಂದಿರಕ್ಕೆ ಹೋಗಿ ಆತನ ಪಾದಪೀಠದ ಮುಂದೆ ಅಡ್ಡಬೀಳೋಣ!>>

8ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ, ನಿನ್ನ ವಾಸಸ್ಥಾನಕ್ಕೆ ಬಂದು ನೆಲೆಸು.

9ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಉತ್ಸಾಹಧ್ವನಿ ಮಾಡಲಿ.

10ನಿನ್ನ ಸೇವಕನಾದ ದಾವೀದನನ್ನು ನೆನಪುಮಾಡಿಕೋ; ನೀನು ಅಭಿಷೇಕಿಸಿದವನನ್ನು ತಳ್ಳಿಬಿಡಬೇಡ.

11ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವುದಿಲ್ಲ. <<ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;

12ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.>>

13ನಿಶ್ಚಯವಾಗಿ ಯೆಹೋವನು ಚೀಯೋನನ್ನು ಅಪೇಕ್ಷಿಸಿ, ತನ್ನ ನಿವಾಸಕ್ಕಾಗಿ ಆರಿಸಿಕೊಂಡಿದ್ದಾನೆ.

14ಆತನು, <<ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ.

15ಇದರ ಆದಾಯವನ್ನು ಆಶೀರ್ವದಿಸುವೆನು; ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು;

16ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿ ಮಾಡುವರು.

17ಇಲ್ಲಿಯೇ ದಾವೀದನ ಕೊಂಬು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನ ದೀಪವು ಉರಿಯುತ್ತಲೇ ಇರಬೇಕೆಂದು ನೇಮಿಸಿದ್ದೇನೆ.

18ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.>>


  Share Facebook  |  Share Twitter

 <<  Psalms 132 >> 


Bible2india.com
© 2010-2024
Help
Dual Panel

Laporan Masalah/Saran