Bible 2 India Mobile
[VER] : [KANNADA]     [PL]  [PB] 
 <<  Psalms 143 >> 

1ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.

2ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.

3ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ.

4ನನ್ನ ಆತ್ಮವು ಕುಂದಿಹೋಗಿದೆ; ನನ್ನ ಮನಸ್ಸು ಬೆರಗಾಗಿದೆ.

5ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ;

6ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ

7ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.

8ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸುನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.

9ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ; ಶತ್ರುಗಳಿಂದ ನನ್ನನ್ನು ಬಿಡಿಸು.

10ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.

11ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.

12ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.


  Share Facebook  |  Share Twitter

 <<  Psalms 143 >> 


Bible2india.com
© 2010-2024
Help
Dual Panel

Laporan Masalah/Saran