Bible 2 India Mobile
[VER] : [KANNADA]     [PL]  [PB] 
 <<  Psalms 146 >> 

1ಯೆಹೋವನಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು.

2ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.

3ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,

4ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ, ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು.

5ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.

6ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,

7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.

8ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.

9ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.

10ಯೆಹೋವನು ಸದಾಕಾಲವೂ ಅರಸನಾಗಿರುವನು, ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು, ಯೆಹೋವನಿಗೆ ಸ್ತೋತ್ರ!


  Share Facebook  |  Share Twitter

 <<  Psalms 146 >> 


Bible2india.com
© 2010-2024
Help
Dual Panel

Laporan Masalah/Saran