Bible 2 India Mobile
[VER] : [KANNADA]     [PL]  [PB] 
 <<  Psalms 149 >> 

1ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.

2ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.

3ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.

4ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.

5ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.

6ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.

7ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು;

8ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.

9ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ!


  Share Facebook  |  Share Twitter

 <<  Psalms 149 >> 


Bible2india.com
© 2010-2024
Help
Dual Panel

Laporan Masalah/Saran