Bible 2 India Mobile
[VER] : [KANNADA]     [PL]  [PB] 
 <<  Psalms 15 >> 

1ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು?

2ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.

3ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು.

4ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.

5ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.


  Share Facebook  |  Share Twitter

 <<  Psalms 15 >> 


Bible2india.com
© 2010-2024
Help
Dual Panel

Laporan Masalah/Saran