Bible 2 India Mobile
[VER] : [KANNADA]     [PL]  [PB] 
 <<  Psalms 150 >> 

1ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.

2ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ.

3ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.

4ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತೀವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.

5ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.

6ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!


  Share Facebook  |  Share Twitter

 <<  Psalms 150 >> 


Bible2india.com
© 2010-2024
Help
Dual Panel

Laporan Masalah/Saran