Bible 2 India Mobile
[VER] : [KANNADA]     [PL]  [PB] 
 <<  Psalms 16 >> 

1ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.

2ನಾನು ಯೆಹೋವನನ್ನು ಕುರಿತು, <<ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ>> ಎಂದು ಹೇಳುವೆನು.

3ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, <<ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು>> ಎಂದು ಹೇಳುವೆನು.

4ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.

5ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವಾಸ್ತ್ಯವನ್ನು ಭದ್ರಗೊಳಿಸುತ್ತೀ.

6ನನಗೆ ಪ್ರಾಪ್ತವಾಗಿರುವ ಸ್ವಾಸ್ತ್ಯವು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ.

7ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.

8ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.

9ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು.

10ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.

11ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.


  Share Facebook  |  Share Twitter

 <<  Psalms 16 >> 


Bible2india.com
© 2010-2024
Help
Dual Panel

Laporan Masalah/Saran