Bible 2 India Mobile
[VER] : [KANNADA]     [PL]  [PB] 
 <<  Psalms 2 >> 

1ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?

2ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,

3<<ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ>> ಎಂದು ಮಾತನಾಡಿಕೊಳ್ಳುತ್ತಾರಲ್ಲಾ.

4ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.

5ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,

6<<ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು>> ಎಂದು ಹೇಳುವನು.

7ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, <<ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.

8ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವಾಸ್ತ್ಯವಾಗಿ ಕೊಡುವೆನು.

9ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ>> ಎಂದು ಹೇಳಿದನು.

10ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರ್ರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ.

11ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.

12ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನನ್ನು ಆಶ್ರಯಿಸುವವರೆಲ್ಲರು ಧನ್ಯರು.


  Share Facebook  |  Share Twitter

 <<  Psalms 2 >> 


Bible2india.com
© 2010-2024
Help
Dual Panel

Laporan Masalah/Saran