Bible 2 India Mobile
[VER] : [KANNADA]     [PL]  [PB] 
 <<  Psalms 23 >> 

1ಯೆಹೋವನು ನನಗೆ ಕುರುಬನು; ಕೊರತೆಪಡೆನು.

2ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.

3ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.

4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.

5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನನ್ನು ಅಥಿತಿಯಂತ್ತೆ ಸ್ವಿಕರಿಸಿ, ನನ್ನ ತಲೆಗೆ ತೈಲವನ್ನು ಹಚ್ಚಿ ನನ್ನ ಧಣಿವಾರಿಸುವಿ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

6ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.


  Share Facebook  |  Share Twitter

 <<  Psalms 23 >> 


Bible2india.com
© 2010-2024
Help
Dual Panel

Laporan Masalah/Saran