Bible 2 India Mobile
[VER] : [KANNADA]     [PL]  [PB] 
 <<  Psalms 46 >> 

1ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

2ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.

3ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ

4ಒಂದು ನದಿ ಇದೆ; ಅದರ ಕಾಲಿವೆಗಳು, ಪರಾತ್ಪರನ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.

5ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.

6ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.

7ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ

8ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.

9ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.

10<<ಮೌನವಾಗಿರ್ರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ>> ಎಂದು ಹೇಳಿದ್ದಾನೆ.

11ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


  Share Facebook  |  Share Twitter

 <<  Psalms 46 >> 


Bible2india.com
© 2010-2024
Help
Dual Panel

Laporan Masalah/Saran