Bible 2 India Mobile
[VER] : [KANNADA]     [PL]  [PB] 
 <<  Psalms 47 >> 

1ಸರ್ವಜನಾಂಗದವರೇ, ಚಪ್ಪಾಳಿ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.

2ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.

3ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.

4ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವಾಸ್ತ್ಯವನ್ನು ಆಯ್ದುಕೊಂಡಿದ್ದಾನೆ. ಸೆಲಾ

5ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.

6ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.

7ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.

8ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.

9ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪಾರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.


  Share Facebook  |  Share Twitter

 <<  Psalms 47 >> 


Bible2india.com
© 2010-2024
Help
Dual Panel

Laporan Masalah/Saran