Bible 2 India Mobile
[VER] : [KANNADA]     [PL]  [PB] 
 <<  Psalms 53 >> 

1ದುರ್ಮತಿಗಳು, <<ದೇವರಿಲ್ಲ>> ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.

2ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,

3ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.

4ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ದೇವರನ್ನು ಸ್ಮರಿಸುವುದಿಲ್ಲ.

5ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ನಿಮಗೆ ಮುತ್ತಿಗೆಹಾಕಿದವರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ನಾಚಿಕೆಗೆ ಒಳಗಾಗುವರು.

6ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.


  Share Facebook  |  Share Twitter

 <<  Psalms 53 >> 


Bible2india.com
© 2010-2024
Help
Dual Panel

Laporan Masalah/Saran