Bible 2 India Mobile
[VER] : [KANNADA]     [PL]  [PB] 
 <<  Psalms 58 >> 

1ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?

2ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.

3ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.

4ಅವರು ಸರ್ಪದಂತೆ ವಿಷಭರಿತರು.

5ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.

6ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೇಹಲ್ಲುಗಳನ್ನು ಕಿತ್ತುಹಾಕು.

7ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.

8ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.

9ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.

10ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.

11ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.


  Share Facebook  |  Share Twitter

 <<  Psalms 58 >> 


Bible2india.com
© 2010-2024
Help
Dual Panel

Laporan Masalah/Saran