Bible 2 India Mobile
[VER] : [KANNADA]     [PL]  [PB] 
 <<  Psalms 61 >> 

1ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.

2ನಾನು ಎದೆಗುಂದಿದವನಾಗಿ ಭೂಮಿಯ ಕಡೇಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.

3ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ.

4ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ

5ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.

6ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ.

7ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.

8ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.


  Share Facebook  |  Share Twitter

 <<  Psalms 61 >> 


Bible2india.com
© 2010-2024
Help
Dual Panel

Laporan Masalah/Saran