Bible 2 India Mobile
[VER] : [KANNADA]     [PL]  [PB] 
 <<  Psalms 64 >> 

1ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.

2ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು.

3ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.

4ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.

5ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, <<ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?>> ಅಂದುಕೊಳ್ಳುತ್ತಾರೆ.

6ಅವರು, <<ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ>> ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.

7ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು.

8ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.

9ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.

10ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳಹೃದಯದವರೆಲ್ಲರೂ ಹಿಗ್ಗುವರು.


  Share Facebook  |  Share Twitter

 <<  Psalms 64 >> 


Bible2india.com
© 2010-2024
Help
Dual Panel

Laporan Masalah/Saran