Bible 2 India Mobile
[VER] : [KANNADA]     [PL]  [PB] 
 <<  Psalms 70 >> 

1ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗನೆ ಬಂದು ಸಹಾಯ ಮಾಡು.

2ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.

3ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.

4ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, <<ದೇವರು ಮಹೋನ್ನತನು>> ಎಂದು ಯಾವಾಗಲೂ ಹೇಳಲಿ.

5ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.


  Share Facebook  |  Share Twitter

 <<  Psalms 70 >> 


Bible2india.com
© 2010-2024
Help
Dual Panel

Laporan Masalah/Saran