Bible 2 India Mobile
[VER] : [KANNADA]     [PL]  [PB] 
 <<  Psalms 75 >> 

1ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.

2ದೇವರು ನುಡಿದದ್ದು, <<ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.

3ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ>> ಎಂಬುದು. ಸೆಲಾ

4ನಾನು ಹೆಮ್ಮೆಗಾರರಿಗೆ, <<ಕೊಚ್ಚಿಕೊಳ್ಳಬೇಡಿರಿ>> ಎಂದು; ದುಷ್ಟರಿಗೆ, <<ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;

5ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ>> ಎಂದು ಹೇಳುವೆನು.

6ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, ಅರಣ್ಯದಿಂದಾಗಲಿ ಬರುವುದಿಲ್ಲ.

7ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.

8ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.

9ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.

10ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳನ್ನು ಉನ್ನತಮಟ್ಟಕ್ಕೆ ಎತ್ತಲ್ಪಡುವವು.


  Share Facebook  |  Share Twitter

 <<  Psalms 75 >> 


Bible2india.com
© 2010-2024
Help
Dual Panel

Laporan Masalah/Saran