Bible 2 India Mobile
[VER] : [KANNADA]     [PL]  [PB] 
 <<  Psalms 82 >> 

1ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ಇತರ ದೇವರುಗಳೊಳಗೆ ನ್ಯಾಯವಿಧಿಸುತ್ತಾನೆ.

2<<ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.

3ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.

4ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.>>

5ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.

6<<ನೀವು ದೇವರುಗಳು, ಎಲ್ಲರೂ ಪರಾತ್ಪರನ ಮಕ್ಕಳು,

7ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ>> ಎಂದು ನಾನು ಹೇಳಿದೆನು.

8ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?


  Share Facebook  |  Share Twitter

 <<  Psalms 82 >> 


Bible2india.com
© 2010-2024
Help
Dual Panel

Laporan Masalah/Saran