Bible 2 India Mobile
[VER] : [KANNADA]     [PL]  [PB] 
 <<  Psalms 87 >> 

1ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.

2ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.

3ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,

4<<ಐಗುಪ್ತ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು>> ಎಂಬುದೇ.

5ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನು ತಾನೇ ಸ್ಥಿರಪಡಿಸುವನು.

6ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, <<ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು>> ಎಂದು ಬರೆಯುವನು. ಸೆಲಾ

7ಇವರು ಹಾಡುತ್ತಾ, ಕುಣಿಯುತ್ತಾ, <<ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ>> ಎಂದು ಹೇಳುವರು.


  Share Facebook  |  Share Twitter

 <<  Psalms 87 >> 


Bible2india.com
© 2010-2024
Help
Dual Panel

Laporan Masalah/Saran