Bible 2 India Mobile
[VER] : [KANNADA]     [PL]  [PB] 
 <<  Psalms 95 >> 

1ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.

2ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.

3ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.

4ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ.

5ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ.

6ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.

7ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.

8ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.

9ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.

10ನಾನು ನಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; <<ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಮಾರ್ಗವನ್ನು ತಿಳಿಯದವರು>> ಎಂದು ಹೇಳಿದೆನು.

11ಆದುದರಿಂದ ಇವರು, <<ನನ್ನ ವಿಶ್ರಾಂತಿಯಲ್ಲಿ ಸೇರಬಾರದು>> ಎಂದು ಕೋಪಗೊಂಡು ಪ್ರಮಾಣಮಾಡಿದೆನು.


  Share Facebook  |  Share Twitter

 <<  Psalms 95 >> 


Bible2india.com
© 2010-2024
Help
Dual Panel

Laporan Masalah/Saran