Bible 2 India Mobile
[VER] : [KANNADA]     [PL]  [PB] 
 <<  Psalms 97 >> 

1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.

2ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ನೀತಿ ಮತ್ತು ನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.

3ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.

4ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು.

5ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.

6ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.

7ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳಿರಾ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.

8ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.

9ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.

10ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.

11ನೀತಿವಂತರಿಗೋಸ್ಕರ ಪ್ರಕಾಶವೂ, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.

12ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.


  Share Facebook  |  Share Twitter

 <<  Psalms 97 >> 


Bible2india.com
© 2010-2024
Help
Dual Panel

Laporan Masalah/Saran