Bible 2 India Mobile
[VER] : [KANNADA]     [PL]  [PB] 
 <<  Psalms 99 >> 

1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.

2ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.

3ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.

4ಅರಸನ ಬಲವು ನೀತಿಯಲ್ಲಿ ಆಸಕ್ತವಾಗಿದೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.

5ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.

6ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.

7ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.

8ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ.

9ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.


  Share Facebook  |  Share Twitter

 <<  Psalms 99 >> 


Bible2india.com
© 2010-2024
Help
Dual Panel

Laporan Masalah/Saran