Bible 2 India Mobile
[VER] : [KANNADA]     [PL]  [PB] 
 <<  Revelation 6 >> 

1ಕುರಿಮರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತಿದ್ದ ಸ್ವರದಿಂದ <<ಬಾ!>> ಎಂದು ಹೇಳುವುದನ್ನು ಕೇಳಿದೆನು.

2ನಾನು ನೋಡಲು ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲ್ಪಟ್ಟಿತು. ಅವನು ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.

3ಆತನು ಎರಡನೆಯ ಮುದ್ರೆಯನ್ನು ಒಡೆದಾಗ ಎರಡನೆಯ ಜೀವಿಯು <<ಬಾ>>! ಎಂದು ಹೇಳುವುದನ್ನು ಕೇಳಿದೆನು.

4ಆಗ ಕೆಂಪಾಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಕೊಡಲ್ಪಟ್ಟಿತು.

5ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು <<ಬಾ>>! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.

6ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಒಂದು <<ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ>> ಎಂದು ಹೇಳಿತು.

7ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು <<ಬಾ>>! ಎನ್ನುವ ಶಬ್ದವನ್ನು ಕೇಳಿದೆನು.

8ಆಗ ನಾನು ನೋಡಲು ಇಗೋ, ನಸು ಹಸಿರು ಹಾಗು ಬೂದಿ ಮಿಶ್ರಿತ ಬಣ್ಣವನ್ನು ಹೆಣ ಅಥವಾ ಶವಗಳ ಬಣ್ಣವೆಂದು ಸ್ಪಷ್ಟವಾಗಿ ಪರಿಗಣಿಸಲಾಗಿದೆ: ಜೆಕ. ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಯೆಹೆ. ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.

9ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.

10ಅವರು, <<ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?>> ಎಂದು ಮಹಾಶಬ್ದದಿಂದ ಕೂಗಿದರು.

11ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು.

12ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.

13ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು.

14ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು ಮರೆಯಾಯಿತು. ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು.

15ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.

16ಬೆಟ್ಟಗಳಿಗೂ ಬಂಡೆಗಳಿಗೂ, <<ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.

17ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?>> ಎಂದು ಹೇಳಿದರು.


  Share Facebook  |  Share Twitter

 <<  Revelation 6 >> 


Bible2india.com
© 2010-2024
Help
Dual Panel

Laporan Masalah/Saran