Bible 2 India Mobile
[VER] : [KANNADA]     [PL]  [PB] 
 <<  Jeremiah 45 >> 

1ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರುಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.

2<<ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, <ನನ್ನ ಗತಿಯನ್ನು ಏನು ಹೇಳಲಿ?

3ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು> ಎಂದು ನೀನು ಹೇಳಿದೆಯಲ್ಲಾ,

4ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.

5ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.>>


  Share Facebook  |  Share Twitter

 <<  Jeremiah 45 >> 


Bible2india.com
© 2010-2024
Help
Dual Panel

Laporan Masalah/Saran