Bible 2 India Mobile
[VER] : [KANNADA]     [PL]  [PB] 
 <<  Isaiah 12 >> 

1ಆ ದಿನದಲ್ಲಿ ನೀನು ಹೇಳುವುದೇನೆಂದರೆ, <<ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.

2ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.>>

3ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.

4ಆ ದಿನದಲ್ಲಿ ನೀವು ಹೇಳುವುದೇನೆಂದರೆ, <<ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ.

5ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.

6ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ>> ಎಂಬುದೇ.


  Share Facebook  |  Share Twitter

 <<  Isaiah 12 >> 


Bible2india.com
© 2010-2024
Help
Dual Panel

Laporan Masalah/Saran