Bible 2 India Mobile
[VER] : [KANNADA]     [PL]  [PB] 
 <<  Isaiah 18 >> 

1ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು,

2ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ, ವೇಗವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ, ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.

3ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತೂತುರಿಯನ್ನೂದುವಾಗ ಕೇಳಿರಿ!

4ಯೆಹೋವನು ನನಗೆ ಹೇಳುವುದೇನೆಂದರೆ, <<ಬಿಸಿಲಿನಲ್ಲಿ ಜಳಜಳಿಸುವ ದಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು>> ಎಂಬುದೇ.

5ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷೆ ದೋರೆ ಕಾಯಿಯಾಗುವಾಗ, ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.

6ಅವೆಲ್ಲವು ಬೆಟ್ಟದ ಪಕ್ಷಿಗಳಿಗೂ, ಭೂಮಿಯ ಕಾಡುಮೃಗಗಳಿಗೂ ಆಹಾರವಾಗಿ ಬಿದ್ದಿರುವವು. ಬೇಸಿಗೆಯಲ್ಲಿ ಪಕ್ಷಿಗಳಿಗೂ, ಹಿಮಕಾಲದಲ್ಲಿ ಕಾಡುಮೃಗಗಳಿಗೂ ಆಹಾರವಾಗುವುದು.

7ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.


  Share Facebook  |  Share Twitter

 <<  Isaiah 18 >> 


Bible2india.com
© 2010-2024
Help
Dual Panel

Laporan Masalah/Saran