Bible 2 India Mobile
[VER] : [KANNADA]     [PL]  [PB] 
 <<  Joshua 13 >> 

1ಯೆಹೋಶುವನು ದಿನತುಂಬಿದ ಮುದುಕನಾಗಿರುವೆ ಯೆಹೋವನು ಅವನಿಗೆ, <<ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.

2ಅವುಗಳು ಯಾವುವೆಂದರೆ: ಐಗುಪ್ತದ ಈಚೆಯಲ್ಲಿರುವ ಶೀಹೋರ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿರುವ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ

3ಗಾಜಾ, ಅಷ್ಟೋದ್, ಅಷ್ಕೆಲೋನ್ಯ , ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ; ಗೆಷರಾ ಸೀಮೆಯು,

4ದಕ್ಷಿಣದಲ್ಲಿದ್ದ ಅವ್ವೀಯರ ದೇಶ ಚೀದೊನ್ಯರಿಗೆ ಸೇರಿದ ಮೆಯರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು

5ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯ ವರೆಗಿರುವ ಲೆಬನೊನಿನ ಪೂರ್ವ ಪ್ರದೇಶ;

6ಒಟ್ಟಾರೆ ಲೆಬನೋನಿನಿಂದ ಮಿಸ್ರ ಫೋತ್ಮಯೀಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತಗಳು. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ

7ಒಂಬತ್ತು ಕುಲಗಳಿಗೂ, ಮನಸ್ಸೆಕುಲದ ಅರ್ಧ ಜನರಿಗೂ ಪಾಲು ಮಾಡಿ ಕೊಡು>> ಎಂದನು .

8ಮನಸ್ಸೆಕುಲದ ಉಳಿದ ಅರ್ಧಜನರಿಗೆ , ರೂಬೇನರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೋರ್ದಾನಿನ ಆಚೆಕಡೆಯಲ್ಲಿರುವ ಸ್ವಾಸ್ಥ್ಯವು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುದೆಂದರೆ-:

9ಅರ್ನೋನಿನ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲ ಸೀಮೆ;

10ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮ್ಮೋನಿಯರ ಮೇರೆಯ ಈಚೆಗೆ ಇದ್ದಂತಹ ಎಲ್ಲಾ ಪಟ್ಟಣಗಳು; ಗಿಲ್ಯಾದ್ ಸೀಮೆ

11ಗೆಷೂರ‍್ಯರ ಮತ್ತು ಮಾಕತೀಯರ ಪ್ರಾoತ್ಯಗಳು, ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ,

12ಅಷ್ಟರೋತ್ ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಸಲ್ಕಾ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳೂ. ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.

13ಇಸ್ರಾಯೇಲ್ಯರು ಗೆಷೂರ‍್ಯರನ್ನೂ , ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ‍್ಯರೂ ಮಾಕತೀಯರೂ ಅವರು ಇಂದಿನವರೆಗೆ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ.

14ಲೇವಿಯಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ಥ್ಯವಾಗಿತ್ತು.

15ಮೋಶೆಯು ರೂಬೇನ್ಯರ ಮಕ್ಕಳ ಗೋತ್ರಗಳಿಗೆ ಸ್ವಾಸ್ಥ್ಯವಾಗಿ ಕೊಟ್ಟ ಪ್ರದೇಶಗಳು ಯಾವುದೆಂದರೆ-

16ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಆರೋಯೇರ್ ಪಟ್ಟಣ;

17ಮೇದೆಬದ ತಪ್ಪಲ ಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣ ,ಅಲ್ಲೇ ಎತ್ತರವಾದ ಬೈಲಿನಲ್ಲಿರುವ ದೀಬೋನು, ಬಾಮೋತ್ ಬಾಳ್ ಬೆತ್ಬಾಳ್ಮ್‌ಯೋನ್,

18ಯಹಚಾ ಕೆದೇಮೋತ್, ಮೇಫಾಯತ್,

19ಕಿರ್ಯಾತಯಿಮ್ ಸಿಬ್ಮಾಎಂಬ ಹೆಷ್ಬೋನಿನ ಉಪಗ್ರಾಮಗಳು, ಕಣಿವೆಯಲ್ಲಿರುವ ಬೆಟ್ಟದ ಮೇಲಿನ ಚೆರೆತ್ ಶಹರ್,

20ಬೇತ್ಪೆಯಾರ್, ಎಂಬ ಪಟ್ಟಣಗಳೂ ಪಿಸ್ಗಾದ ಬುಡದಲ್ಲಿರುವ ಸೀಮೆ , ಬೇತ್‌ಯೆಷಿಮೋತ್ ಪಟ್ಟಣ,

21ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನಿನ ಸಮಸ್ತ ರಾಜ್ಯಗಳು. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನ್ನೂ ಎವೀ, ರೆಕೆಮ್, ಚೂರ್, ಹೂರ್,ರೆಬಾ ಎಂಬ ಮಿದ್ಯಾನ ಪ್ರಭುಗಳಾಗಿರುವ ಅವನ ಸರದಾರರನ್ನೂ ಕೊಂದುಹಾಕಿದನು.

22ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೇಯೋರನ ಮಗನೂ ಶಕುನ ನೋಡುವವನಾಗಿದ್ದ ಬಿಳಾಮನೂ ಇದ್ದನು.

23ಯೋರ್ದಾನ್ ಹೊಳೆಯು, ರೂಬೇನ್ಯರ ಪಡುವಣ ಮೇರೆಯಾಗಿತ್ತು. ರೂಬೇನ್ಯರ ಗೋತ್ರಗಳಿಗೆ ಸ್ವಾಸ್ಥ್ಯವಾಗಿ ಸಿಕ್ಕಿದ ಗ್ರಾಮನಗರಗಳು ಇವುಗಳೇ.

24ಮೋಶೆಯು ಗಾದ್ ಕುಲದ ಗೋತ್ರಗಳಿಗೆ ಸ್ವಾಸ್ಥ್ಯವಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ-

25ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ,

26ಹೆಷ್ಬೋನಿನಿಂದ ರಾಮತ್ ಮಿಚ್ಪೆ , ಬೆಟೊನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹಾನಯಿಮಿನಿಂದ ದೆಬೀರ್ ಪ್ರಾಂತದವರೆಗೂ ಇರುವ ಸೀಮೆ,

27ಯೋರ್ದಾನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಪೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೋರ್ದಾನಿನ ಪೂರ್ವ ಪ್ರದೇಶಗಳು.

28ಈ ಎಲ್ಲಾ ಗ್ರಾಮನಗರಗಳು ಗಾದ್ ಕುಲದ ಸ್ವಾಸ್ಥ್ಯವಾದವು.

29ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ ಸೀಮೆಯನ್ನು,

30ಮೋಶೆಯು ಮನಸ್ಸೆ ಕುಲದ ಅರ್ಧ ಗೋತ್ರಗಳಿಗೆ ಕೊಟ್ಟನು. ಯಾಯೀರನ ಗ್ರಾಮಗಳೆನಿಸಿಕೊಳ್ಳುವ ಅರವತ್ತು ಊರುಗಳು ಇದರೊಂದಿಗೆ ಇರುತ್ತವೆ.

31ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು.

32ಮೋಶೆಯು ಯೋರ್ದಾನಿನ ಆಚೆ ಯೆರಿಕೋವಿನ ಎದುರಿನಲ್ಲಿರುವ ಮೋವಾಬ್ಯರ ಬಯಲಿನಲ್ಲಿದ್ದಾಗ ಇವುಗಳನ್ನು ಅವರಿಗೆ ಸ್ವಾಸ್ಥ್ಯವಾಗಿ ಕೊಟ್ಟನು.

33ಆದರೆ ಲೇವಿಯ ಕುಲಕ್ಕೆ ಮೋಶೆಯು ಯಾವ ಸ್ವಾಸ್ಥ್ಯವನ್ನು ಕೊಡಲಿಲ್ಲ .ಯಾಕೆಂದರೆ ಇಸ್ರಾಯೇಲ್ಯರ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ಆತನೇ ಅವರ ಸ್ವಾಸ್ಥ್ಯವಾಗಿದ್ದನು.


  Share Facebook  |  Share Twitter

 <<  Joshua 13 >> 


Bible2india.com
© 2010-2024
Help
Dual Panel

Laporan Masalah/Saran