1ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು:
2<<ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.
3ನನ್ನನ್ನು ಸಮುದ್ರದ ಆಗಾಧಸ್ಥಳದಲ್ಲಿ ಹಾಕಿದಿಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು
4<ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದು ಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು? >
5ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, ಮಹಾಸಾಗರವು ನನ್ನನ್ನು ಆವರಿಸಿತು, ಕಡಲಕಳೆಯು ಪಾಚಿಯೂ ನನ್ನ ತಲೆಯನ್ನು ಸುತ್ತಿಕೊಂಡಿತು.
6ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಳಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂದಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.
7<<ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.
8<<ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.
9ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.>>
10ಆದರೆ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.