Bible 2 India Mobile
[VER] : [KANNADA]     [PL]  [PB] 
 <<  Zechariah 4 >> 

1ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ <<ಏನು ನೋಡುತ್ತೀ?>> ಎಂದು ಕೇಳಲು ನಾನು,

2<<ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;

3ಆ ಪಾತ್ರೆಯ ಬಲಗಡೆಯಲ್ಲಿ ಒಂದು ಎಣ್ಣೆಯ ಮರ, ಎಡಗಡೆಯಲ್ಲಿ ಒಂದು ಎಣ್ಣೆಯ ಮರ, ಮತ್ತು ಎರಡು ಮರಗಳು ಅದರ ಪಕ್ಕಗಳಲ್ಲಿ ಇದೆ>> ಎಂದು ಹೇಳಿದೆನು.

4ಪುನಃ ನಾನು ಪ್ರಸ್ತಾಪವೆತ್ತಿ ವಿವರಿಸುವ ದೇವದೂತನನ್ನು, <<ಸ್ವಾಮೀ, ಇವು ಏನನ್ನು ಸೂಚಿಸುತದೆ?>> ಎಂದು ಕೇಳಿದ್ದಕ್ಕೆ,

5ಆ ದೇವದೂತನು <<ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?>> ಎಂಬುದಾಗಿ ನನ್ನನ್ನು ಪ್ರಶ್ನೆಮಾಡಲು, <<ನಾನು ಇಲ್ಲ ಸ್ವಾಮಿ>> ಎಂದು ಅರಿಕೆ ಮಾಡಿದೆನು.

6ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, <<ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ>> ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.

7ದೊಡ್ಡ ಬೆಟ್ಟವೇ, <<ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ>> ಎಂಬ ಜನಘೋಷವಾಗುವುದು.

8ಅಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ,

9<<ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ. ಆ ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ>> ಎಂದು ನನಗೆ ಗೊತ್ತಾಗುವುದು.

10ಆಗ ದೂತನು <<ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಿದವರು ಯಾರು?

11ಆಗ ನಾನು ದೇವದೂತನಿಗೆ, ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು?>> ಎಂದೆನು.

12ಮತ್ತೆ ನಾನು ಅವನಿಗೆ, ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ. ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು? ಎಂದು ಕೇಳಿದೆ.

13ಅದಕ್ಕೆ ಆ ದೂತನು ನನಗೆ, <<ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?>>ಎಂದು ಕೇಳಿದಾಗ ನಾನು, <<ಇಲ್ಲ ಸ್ವಾಮೀ>> ಎಂದೆ.

14ಅದಕ್ಕೆ ಅವನು, <<ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಆ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವ ಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ>> ಎಂದು ಹೇಳಿದನು.


  Share Facebook  |  Share Twitter

 <<  Zechariah 4 >> 


Bible2india.com
© 2010-2024
Help
Dual Panel

Laporan Masalah/Saran