Bible 2 India Mobile
[VER] : [KANNADA]     [PL]  [PB] 
 <<  Zechariah 6 >> 

1ನಂತರ ನಾನು ಕಣ್ಣೆತ್ತಿ ನೋಡಲು, ಇಗೋ, ಎರಡು ಬೆಟ್ಟಗಳ ನಡುವೆಯಿಂದ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅ ಬೆಟ್ಟಗಳು ತಾಮ್ರದವುಗಳಾಗಿದ್ದವು.

2ಮೊದಲನೆಯ ರಥಕ್ಕೆ ಕೆಂಪು ಕುದುರೆಗಳು; ಎರಡನೆಯ ರಥಕ್ಕೆ ಕಪ್ಪು ಕುದುರೆಗಳು;

3ಮೂರನೆಯ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೆಯ ರಥಕ್ಕೆ ಮಚ್ಚೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.

4ಆಗ ನನ್ನ ಸಂಗಡ ಮಾತನಾಡಿದ ದೇವದೂತನಿಗೆ, <<ನನ್ನ ಸ್ವಾಮೀ ಇದೇನು?>> ಎಂದೆನು.

5ಆ ದೇವದೂತನು ನನಗೆ, <<ಇವು ಆಕಾಶದ ನಾಲ್ಕುಗಾಳಿಗಳು (ಆತ್ಮ); ಭೂಲೋಕದ ಒಡೆಯನ ಸನ್ನಿಧಾನದಲ್ಲಿ ನಿಂತಿದ್ದು ಅಲ್ಲಿಂದ ಹೊರಟು ಬರುತ್ತಾ ಇವೆ>> ಎಂದು ಉತ್ತರಕೊಟ್ಟನು.

6ಅನಂತರ ಕಪ್ಪು ಕುದುರೆಗಳ ರಥ ಉತ್ತರದೇಶಕ್ಕೆ ಹೊರಟವು. ಬಿಳಿ ಕುದುರೆಗಳು ಅವುಗಳನ್ನು ಪಶ್ಚಿಮಕ್ಕೆ ಹಿಂಬಾಲಿಸಿದವು. ಮಚ್ಚೆ ಮಚ್ಚೆಯ ಕುದುರೆಗಳ ರಥ ದಕ್ಷಿಣ ದೇಶಕ್ಕೆ ಹೋದವು.

7ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವುದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಆಗ ಅವನು, <<ಹೊರಡಿರಿ, ಲೋಕದಲ್ಲಿ ಸಂಚರಿಸಿರಿ>>ಎಂದು ಅಪ್ಪಣೆ ಮಾಡಲು ಅವು ಲೋಕದಲ್ಲಿ ಸಂಚರಿಸಿದವು.

8ಆ ಮೇಲೆ ಅವನು ನನಗೆ, <<ಆಹಾ, ಉತ್ತರ ದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ>> ಎಂದು ಕೂಗಿ ಹೇಳಿದನು.

9ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

10ಇನ್ನು ಸೆರೆಯಲ್ಲಿರುವವರೊಳಗೆ ಸೇರಿದವರಾದ ಹೆಲ್ದಾಯ, ತೋಬೀಯ ಮತ್ತು ಯೆದಾಯ ಎಂಬುವರ ಕೈಯಿಂದ ಬೆಳ್ಳಿ ಬಂಗಾರಗಳನ್ನು ತೆಗೆದುಕೋ; ಈ ದಿನವೇ ನೀನು ಹೋಗಿ ಬಾಬೆಲಿನಿಂದ ಬಂದು, ಇವರು ಇಳಿದುಕೊಂಡಿರುವ ಚೆಫನ್ಯನ ಮಗನಾದ ಯೋಷಿಯನ ಮನೆಗೆ ಹೋಗಿ,

11ಇವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಕಿರೀಟವನ್ನು ಮಾಡಿ ಯೆಹೋಚಾದಾಕನ ಮಗನೂ ಹಾಗೂ ಮಹಾಯಾಜಕನು ಆದ ಯೆಹೋಶುವನ ತಲೆಯ ಮೇಲೆ ಇಟ್ಟು,

12ಅವನಿಗೆ ಹೀಗೆ ಹೇಳು, <<ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, <ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು.

13ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮ್ಮತಿಸಮಾಧಾನದಿಂದ ಇರುವರು.

14<< <ಆ ಕಿರೀಟವು ಹೇಲೆಮ್, ತೋಬೀಯ, ಯೆದಾಯ, ಚೆಫನ್ಯನ ಮಗನಾದ ಹೇನ್ ಇವರ ಜ್ಞಾಪಕಾರ್ಥವಾಗಿ ಯೆಹೋವನ ಆಲಯದಲ್ಲಿ ಇಡಲಾಗಿದೆ.

15ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಡವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.> >>


  Share Facebook  |  Share Twitter

 <<  Zechariah 6 >> 


Bible2india.com
© 2010-2024
Help
Dual Panel

Laporan Masalah/Saran