Bible 2 India Mobile
[VER] : [KANNADA]     [PL]  [PB] 
 <<  1 John 1 >> 

1ನಾವು ನಿಮಗೆ ಪ್ರಚೂರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.

2ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.

3ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.

4ನಿಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ನಿಮಗೆ ಬರೆಯುತ್ತಿದ್ದೇವೆ.

5ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.

6ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.

7ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.

8ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.

9ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.

10ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡಿದಂತಾಗುತ್ತದೆ ಮತ್ತು ಆತನ ವಾಕ್ಯವು ನಮ್ಮಲ್ಲಿ ನೆಲೆಗೊಂಡಿರುವುದಿಲ್ಲ.



 <<  1 John 1 >> 


Bible2india.com
© 2010-2026
Help
Single Panel

Laporan Masalah/Saran