Bible 2 India Mobile
[VER] : [KANNADA]     [PL]  [PB] 
 <<  Job 25 >> 

1ಆ ಮೇಲೆ ಶೂಹ್ಯನಾದ ಬಿಲ್ದದನು ಹೀಗೆಂದನು,

2<<ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.

3ಆತನ ಸೈನ್ಯಗಳಿಗೆ ಲೆಕ್ಕವಿದೆಯೋ? ಆತನ ತೇಜಸ್ಸು ಯಾರಲ್ಲಿಯೂ ಮೂಡುವುದಿಲ್ಲ?

4ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?

5ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ.

6ಹೀಗಿರುವಲ್ಲಿ ನರ ಹುಳವು ಅಶುದ್ಧವಾದದ್ದು! ನರ ಕ್ರಿಮಿಯು ಎಷ್ಟೋ ಅಪವಿತ್ರವಾಗಿದ್ದಾನೆ!>>



 <<  Job 25 >> 


Bible2india.com
© 2010-2025
Help
Single Panel

Laporan Masalah/Saran