Bible 2 India Mobile
[VER] : [KANNADA]     [PL]  [PB] 
 <<  Psalms 120 >> 

1ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.

2ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.

3ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?

4ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.

5ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!

6ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು.

7ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.



 <<  Psalms 120 >> 


Bible2india.com
© 2010-2025
Help
Single Panel

Laporan Masalah/Saran