Bible 2 India Mobile
[VER] : [KANNADA]     [PL]  [PB] 
 <<  Psalms 122 >> 

1<<ಯೆಹೋವನ ಮಂದಿರಕ್ಕೆ ಹೋಗೋಣ ಬಾ!>> ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.

2ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ.

3ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ.

4ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.

5ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.

6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. <<ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.

7ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.>>

8ನನ್ನ ಬಂಧುಮಿತ್ರರ ನಿಮಿತ್ತವಾಗಿ, <<ನಿನಗೆ ಸಮಾಧಾನವಾಗಲಿ>> ಎಂದು ಹೇಳುತ್ತೇನೆ.

9ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನಗೆ ಸುಕ್ಷೇಮವನ್ನು ಹಾರೈಸುತ್ತೇನೆ.



 <<  Psalms 122 >> 


Bible2india.com
© 2010-2025
Help
Single Panel

Laporan Masalah/Saran