Bible 2 India Mobile
[VER] : [KANNADA]     [PL]  [PB] 
 <<  Psalms 137 >> 

1ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.

2ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು.

3ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, <<ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ>> ಎಂದು ಹೇಳುತ್ತಿದ್ದರು.

4ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ?

5ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ.

6ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ, ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, ನನ್ನ ನಾಲಿಗೆಯು ಬತ್ತಿಹೋಗಲಿ.

7ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, <<ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ>> ಎಂದು ಹೇಳಿದರಲ್ಲಾ.

8ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.

9ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ.



 <<  Psalms 137 >> 


Bible2india.com
© 2010-2025
Help
Single Panel

Laporan Masalah/Saran