Bible 2 India Mobile
[VER] : [KANNADA]     [PL]  [PB] 
 <<  Psalms 138 >> 

1ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.

2ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ವಾಗ್ದಾನವನ್ನು ವಿಶೇಷ ರೀತಿಯಿಂದ ನೆರವೇರಿಸಿ, ನಿನ್ನ ನಾಮ ಮಹತ್ತನ್ನು ಹೆಚ್ಚಿಸಿದ್ದೀ.

3ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.

4ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು.

5ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.

6ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.

7ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು.

8ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.



 <<  Psalms 138 >> 


Bible2india.com
© 2010-2025
Help
Single Panel

Laporan Masalah/Saran